ಶ್ರೀನಗರ, ಸೆ.17 : ಕಾಶ್ಮೀರದ ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಮುಗಿಸಲಾಗಿದೆ.
ಶ್ರೀನಗರದ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ ಸೇನೆ ಮೂವರು ಉಗ್ರರನ್ನು ಸಾಯಿಸುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
ಉಗ್ರರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ ಸ್ಥಳೀಯ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಯೋಧರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.







































































