ಮೋದಿ 70ನೇ ಹುಟ್ಟುಹಬ್ಬ : ಶುಭಾಶಯಗಳ ಮಹಾಪೂರ

ದಿಲ್ಲಿ, ಸೆ. 17:  ಇಂದು 70ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶ ವಿದೇಶಗಳ ಗಣ್ಯರಿಂದ ಶೂಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಗಣ್ಯಾತಿಗಣ್ಯರು ಮೋದಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಭಾರತದ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಇತರರು ಕೂಡ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳಿಗೆ ಶುಭ ಹಾರೈಸಿದ್ದಾರೆ.

ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 17, 1950 ರಂದು ಗುಜರಾತ್‌ನ ವಡ್‌ನಗರದಲ್ಲಿ ಜನಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪ್ರಧಾನಿ ಮೋದಿಯವರ 70 ನೇ ಹುಟ್ಟುಹಬ್ಬ ನಿಮಿತ್ತ  ಸುಂದರವಾದ ಮರಳು ಕಲಾಕೃತಿ ರಚಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪಿಎಂ ಮೋದಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದು, “ನಿಮ್ಮೊಂದಿಗೆ ರಚನಾತ್ಮಕ ಸಂವಾದವನ್ನು ಮುಂದುವರಿಸಲು ಮತ್ತು ದ್ವಿಪಕ್ಷೀಯ ಮತ್ತು ಅಂತಾರಾಷ್ಟ್ರೀಯ  ವಿಷಯಗಳ ಬಗ್ಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು 70 ನೇ ಜನ್ಮದಿನದಂದು ಪ್ರಧಾನಿ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ. “ಜನ್ಮದಿನದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನಾನು ಬಯಸುತ್ತೇನೆ. ನಮ್ಮ ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಓಲಿ ಹೇಳಿದ್ದಾರೆ.

ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಕ್ತದಾನ ಶಿಬಿರ, ಹಣ್ಣು-ಹಂಪಲು ವಿತರಣೆ ಸೇರಿದಂತೆ ಹಲವಾರು ಸಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.















































































































































error: Content is protected !!
Scroll to Top