ಕಾರ್ಕಳ, ಸೆ.17 : ಬಿಜೆಪಿ ಯುವ ಮೋರ್ಚಾ ಕಾರ್ಕಳ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಎಪ್ಪತ್ತನೇ ಜನ್ಮದಿನದ ಅಂಗವಾಗಿ ಕಾರ್ಕಳದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಬಿಜೆಪಿ ಹಿರಿಯ ಮುಖಂಡ ಎಂ.ಕೆ. ವಿಜಯ್ ಕುಮಾರ್ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮನಿರಾಜ್ ಶೆಟ್ಟಿ, ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯಾನ್ , ನವೀನ್ ನಾಯಕ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.







































































