ಕಾರ್ಕಳ, ಸೆ. 18: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ 20ನೇ ವರ್ಷದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸತೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಕಾರ್ಯದರ್ಶಿ ಪ್ರಶಾಂತ್ ಪೂಜಾರಿ 2019-20ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಅಂತರಿಕ ಲೆಕ್ಕ ಪರಿಶೋಧಕ ಹರಿಪ್ರಸಾದ್ ಆಚಾರ್ಯ ಅವರು 2019-20ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು.ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ನೂತನ ಅಧ್ಯಕ್ಷ ಉದಯ ಅಂಚನ್ ಬೋಳ, ನೂತನ ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ನೂತನ ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ, ನೂತನ ಜೊತೆ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ನೂತನ ಕೋಶಾಧಿಕಾರಿ ವೀಣಾ ಪೂಜಾರಿ, ನೂತನ ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.































































