ಕಾರ್ಕಳ : ಈದುವಿನಲ್ಲಿ ಶಿವಾನಿ ಜ್ಞಾನ ವಿಕಾಸ ಕೇಂದ್ರ ಸೆ. 20ರಂದು ಉದ್ಘಾಟನೆಗೊಂಡಿತು. ಈದು ಮೊಗೆರ್ಕಳ ಕಲಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಅಂಚನ್ ಕೇಂದ್ರ ಉದ್ಗಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿಟ್ಟೆ ಕಾಲೇಜಿನ ಉಪನ್ಯಾಸಕಿ ಅಕ್ಷಯ ಗೋಖಲೆ ಮಾತನಾಡಿ, ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಮೊದಲಾಗಿ ತಾಯಿಯಿಂದ ದೊರೆಯುವುದು. ಎಳವೆಯಲ್ಲೇ ಮಕ್ಕಳಿಗೆ ಆದರ್ಶ ಪುರುಷರ ಕುರಿತು ಮತ್ತು ಪೌರಾಣಿಕ ಕಥೆಯನ್ನು ತಿಳಿಸಿಕೊಡುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪೂರಕವೆಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ನಾರಾಯಣ ಶೆಟ್ಟಿ ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಉಪಯುಕ್ತ ಮಾಹಿತಿ ದೊರೆಯುವುದು ಎಂದರು. ಒಕ್ಕೂಟದ ಅಧ್ಯಕ್ಷ ಅಶೋಕ್ ಎಂ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈದು ಮೊಗೆರ್ಕಳ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುಂದರ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ ಸ್ವಾಗತಿಸಿ, ಮೇಲ್ಚಿಚಾರಕಿ ಭಾರತಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಶುಭಾ ವಂದಿಸಿದರು.
ಈದು : ಶಿವಾನಿ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ
























