ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 27 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್ ದರ್ಜೆ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯಲಿದೆ.
ಮುಂಬಯಿಯಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 8,2020ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ

ಡೆಪ್ಯುಟಿ ಮ್ಯಾನೇಜರ್ – 11
ಮ್ಯಾನೇಜರ್ – 11
ಡೆಪ್ಯುಟಿ ಮ್ಯಾನೇಜರ್ (ಸಿಸ್ಟಂ ಆಫೀಸರ್) – 5
ಒಟ್ಟು 27 ಹುದ್ದೆಗಳು
ವಿದ್ಯಾರ್ಹತೆ: ಎಸ್‌ಬಿಐ ಎಸ್‌ಓ ನೇಮಕಾತಿಯ ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್, ಐಟಿ, ಡಾಟಾ ಸೈನ್ಸ್, ಮೆಷಿನ್ ಲರ್ನಿಂಗ್ ಮತ್ತು ಎಐ; ಎಂಬಿಎ/ಪಿಜಿಡಿಎಂ ಜೊತೆಗೆ ಫೈನಾನ್ಸ್ ವಿದ್ಯಾರ್ಹತೆಯನ್ನು ಎಐಸಿಟಿಇ/ಯುಜಿಸಿಯಿಂದ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಗಸ್ಟ್ 30,2020ರ ಅನ್ವಯ ಕನಿಷ್ಟ 24 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಬಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸುವುದು: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 18,2020 ರಿಂದ ಅಕ್ಟೋಬರ್ 8,2020ರೊಳಗೆ ಅರ್ಜಿ ಸಲ್ಲಿಸಬಹುದು.
ಕೊನೆ ದಿನಾಂಕ : 08-10-2020
ವೆಬ್ ಸೈಟ್ : https://www.sbi.co.in/web/careers






























































