ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣ: ಮಾಜಿ ಸಚಿವ ಕೆ. ಜೆ. ಜಾರ್ಜ್ ಗೆ ಸಿಬಿಐ ಸಮನ್ಸ್

ಬೆಂಗಳೂರು, ಸೆ. 22: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸಿಬಿಐ ಸಮನ್ಸ್ ಜಾರಿಗೊಳಿಸಿದೆ. ಸಿಬಿಐ ಅಧಿಕಾರಿಗಳು   ವಿಧಾನಸೌಧಕ್ಕೆ ಹೋಗಿ  ಖುದ್ದಾಗಿ ಜಾರ್ಜ್ ಅವರಿಗೆ ಸಮನ್ಸ್ ನೀಡಿದ್ದಾರೆ.

ಹೈಕೋರ್ಟ್ ಆದೇಶದಂತೆ ಸಿಬಿಐ ಮತ್ತೆ ತನಿಖೆ ಆರಂಭಿಸಿದ್ದು, ವಿಚಾರಣೆಗಾಗಿ ಕೆ.ಜೆ ಜಾರ್ಜ್ ಸೇರಿದಂತೆ ಇತರೆ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಸಿಬಿಐ ತಂಡವು ಅಂತಿಮ ತನಿಖಾ ವರದಿಯನ್ನು ಕೋರ್ಟಿಗೆ ಸಲ್ಲಿಸಿತ್ತು. ಹಿಂದೆ ಅಂದಿನ ಗೃಹ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ತಂಡ ಈಗ ವಿಸ್ತೃತವಾಗಿ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ಗಣಪತಿ ಅವರ ಆತ್ಮಹತ್ಯೆಗೆ ಯಾವುದೇ ಪ್ರಚೋದನೆ ಇರಲಿಲ್ಲ ಎಂದು ಸಿಬಿಐ ತಂಡ ಬಿ ರಿಪೋರ್ಟ್‌  ನೀಡಿದ್ದಕ್ಕೆ ಪುತ್ರ ನಿಹಾಲ್ ಆಕ್ಷೇಪ ವ್ಯಕ್ತಪಡಿಸಿ, ತನ್ನ ತಂದೆ ಆತ್ಮಹತ್ಯೆಗೆ ಕೆಲವರ ಪ್ರಚೋದನೆ ಇದೆ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಮಡಿಕೇರಿಯ ಲಾಡ್ಜ್ನಲ್ಲಿ ಮಂಗಳೂರಿನ ಡಿವೈಎಸ್ಪಿಯಾಗಿದ್ದ ಎಂ.ಕೆ ಗಣಪತಿ ಅವರು ಜುಲೈ 7, 2016ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಂದರ್ಭದಲ್ಲಿ ಅವರು ಮಂಗಳೂರಿನಲ್ಲಿ ಡಿವೈಎಸ್ಪಿಯಾಗಿದ್ದರು. ಸಾಯುವುದಕ್ಕೂ ಮೊದಲು ನೀಡಿದ್ದ ಸಂದರ್ಶನದಲ್ಲಿ ಗಣಪತಿ ತಮ್ಮ ಸಾವಿಗೆ ಕೆ.ಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ, ಎ.ಎಂ ಪ್ರಸಾದ್ ಕಾರಣ ಎಂದು ಹೇಳಿದ್ದರು. ಆದರೆ, ಪ್ರಮುಖ ಆರೋಪಿಗಳಾದ ಅಂದಿನ ಗೃಹ ಸಚಿವ ಕೆಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್, ಪ್ರಣವ್ ಮೊಹಾಂತಿ ಅವರನ್ನು ನ್ಯಾಯಾಂಗ ಆಯೋಗ ವಿಚಾರಣೆಗೊಳಪಡಿಸಿರಲಿಲ್ಲ.
ಜನಪ್ರತಿನಿಧಿಗಳ ಕೋರ್ಟಿನಲ್ಲಿ ಕೇಸ್ ವಿಡಿಯೋ ಸಾಕ್ಷ್ಯದ ಮೇಲೆ ಆರಂಭವಾದ ಪೊಲೀಸರ ತನಿಖೆ ‘ಅಸಹಜ ಸಾವು’ ಎಂದಷ್ಟೇ ಪ್ರಕರಣದ ತನಿಖೆ ನಡೆದು ನಂತರ ಸಿಐಡಿ ಪಾಲಾಯಿತು. ಸಿಐಡಿ ತನಿಖೆ ನಡೆಸಿ, ಕೆಜೆ ಜಾರ್ಜ್ ಸೇರಿದಂತೆ ಮೂವರಿಗೂ ಕ್ಲೀನ್ ಚಿಟ್ ನೀಡಿ, ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಸಿತು. ರಾಜೀನಾಮೆ ನೀಡಿದ್ದ ಜಾರ್ಜ್ ಮತ್ತೆ ಸಂಪುಟ ಸೇರಿದರು. ಗಣಪತಿ ಕುಟುಂಬದವರ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್, ಪ್ರಕರಣವನ್ನು ಸಿಬಿಐಗೆ ವಹಿಸಿತು, ತನಿಖೆ ನಿಧಾನಗತಿಯಿಂದ ಸಾಗಿ, ಈಗ ಚಾರ್ಜ್ ಶೀಟ್ ಸಲ್ಲಿಕೆ ಹಂತಕ್ಕೆ ಬಂದಿದೆ. ಸಿಬಿಐ ಡಿವೈಎಸ್ಪಿ ರವಿ, ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಸುಬೋಧ್ ಅವರು ತನಿಖಾ ವರದಿ ಸಲ್ಲಿಸಿದ್ದಾರೆ. ಜಾರ್ಜ್ ವಿರುದ್ಧದ ಪ್ರಕರಣ ಜನಪ್ರತಿನಿಧಿಗಳ ಕೋರ್ಟಿನಲ್ಲಿದೆ.






























































































































error: Content is protected !!
Scroll to Top