ಬೆಂಗಳೂರು, ಸೆ. 23 : ಐಪಿಎಲ್ ಪಂದ್ಯಗಳು ಕ್ರಿಕೆಟ್ ಪ್ರೇಮಿಗಳಲ್ಲಿ ರೋಮಾಂಚನ ಹುಟ್ಟಿಸಿರುವಂತೆಯೇ ಕ್ರಿಕೆಟ್ ಬೆಟ್ಟಿಂಗ್ ಕೂಡ ಗರಿಗೆದರಿಕೊಳ್ಳತೊದಗಿದೆ. ಗಲ್ಫ್ ದೇಶದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರು ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ನಸುಕಿನ ವೇಳೆ ಬಂಧಿಸಿ ಅವರಿಂದ 6 ಲ.ರೂ. ವಶಪಡಿಸಿಕೊಂಡಿದ್ದಾರೆ.
ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.



































































