ಬೆಂಗಳೂರು, ಸೆ. 23 : ಕೆಂದ್ರ ಸರಕಾರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ ಆದರೆ , ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಶುಕ್ರವಾರರಂದು ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲು ಮುಂದಾಗಿದ್ದವು. ಆದರೆ, ಇದೀಗ ಕೇವಲ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಶುಕ್ರವಾರ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡಲಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ.



































































