ಕೌಟುಂಬಿಕ ಕಲಹ : ಪತ್ನಿಯ ಮೇಲೆ ಆಸಿಡ್‌ ಹಾಕಿದ ಪತಿ

ಪುತ್ತೂರು, ಸೆ. 24 : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ  ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಪುತ್ತೂರಿನ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.24ರಂದು ಮುಂಜಾನೆ ನಡೆದಿದೆ.

ನೆಲ್ಯಾಡಿ ನಿವಾಸಿ ಬಿಜು ಎಂಬಾತ ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಜಗಳವಾಗಿದ್ದು,  ಬಳಿಕ  ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳ ಜೊತೆಗೆ ವಾಸವಾಗಿದ್ದರು. ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಇಂದು  ಬೆಳಿಗ್ಗೆ 8  ಗಂಟೆಯ ವೇಳೆಗೆ ಶೈನಿ ಹಾಗೂ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.





































































































































error: Content is protected !!
Scroll to Top