ಡಾ.ಎಸ್‌ .ಎಲ್.‌ ಭೈರಪ್ಪನವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಉಡುಪಿ,ಸೆ. 24 : ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ಕೊಡಲ್ಪಡುವ 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಟತಟ್ಟು ಗ್ರಾ.ಪಂ. ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅಕ್ಟೋಬರ್ 10ರಂದು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

2005ರಿಂದ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ರವಿ ಬೆಳಗೆರೆ, ವೀರಪ್ಪ ಮೊಯ್ಲಿ, ನ್ಯಾ. ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ಸಾಲುಮರದ ತಿಮ್ಮಕ್ಕ, ನಟ ಪ್ರಕಾಶ್ ರೈ ಸಹಿತ 15 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ ತಿಳಿಸಿದರು.















































































































































error: Content is protected !!
Scroll to Top