ಉಡುಪಿ ಜಿಲ್ಲಾ ಖಾಜಿ ಬೇಕಲ್‌ ಇಬ್ರಾಹಿಂ ಮುಸ್ಲಿಯಾರ್‌ ನಿಧನ

ಉಡುಪಿ,ಸೆ. 24 :  ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದವರಾದ ಅವರು 7ನೆ ತರಗತಿ ಕಲಿತ ಬಳಿಕ ಧಾರ್ಮಿಕ ವಿದ್ಯಾಭ್ಯಾಸ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ.

ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು

ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.





































































































































error: Content is protected !!
Scroll to Top