ಕಾರ್ಕಳ : ವಿಶ್ವ ಹೃದಯ ದಿನದ ಪ್ರಯುಕ್ತ ಆರಕ್ಷಕರ ಠಾಣೆ ಕಾರ್ಕಳ, ರೋಟರಿ ಆನ್ಸ್ ಕ್ಲಬ್, ಯುವವಾಹಿನಿ ಕಾರ್ಕಳ ಘಟಕ, ರೋಟರ್ಯಾಕ್ಟ್ ಕ್ಲಬ್ ಇವುಗಳ ಜಂಟಿ ಆಶ್ರಯದಲ್ಲಿ ಸೆ. 27ರಂದು ಆನೆಕೆರೆ ವೃತ್ತದಿಂದ ಬಂಡಿಮಠದವರೆಗೆ ಸೈಕಲ್ ಜಾಥಾ ನಡೆಯಿತು. ಪುರಸಭಾ ಸದಸ್ಯೆ ಸುಮಾ ಕೇಶವ್ ಸೈಕಲ್ ಜಾಥಾಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಸಮಾರೋಪ
ಬಂಡಿಮಠದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಡಾ. ಗುರುರಾಜ್ ಭಟ್ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯೂ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿದಿನ ಸಮಯ ನಿಗದಿಗೊಳಿಸಿ ಕ್ರೀಡೆ, ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವೆಂದರು. ನಗರ ಠಾಣಾ ಎಸ್‌ಐ ಮಧು ಬಿ.ಇ., ಗ್ರಾಮಾಂತರ ಠಾಣಾ ಎಸ್‌ಐ ನಾಸಿರ್, ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷೆ ರಮಿತಾ ಶೈಲೆಂದ್ರ ರಾವ್, ಯುವವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲ್ಯಾನ್, ಸ್ವಚ್ಛ ಬಿಗ್ರೇಡ್ ತಂಡದ ರಾಜೇಂದ್ರ ಅಮೀನ್, ರೋಟ್ರ್ಯಾಕ್ಟ್ ಸಂಸ್ಥೆಯ ಅಧ್ಯಕ್ಷ ರಾಹುಲ್, ಉದ್ಯಮಿ ರಜತ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಕ್ಬಾಲ್ ಅಹಮದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶೈಲೆಂದ್ರ ರಾವ್, ಸುರೇಶ್ ನಾಯಕ್, ರೋಷನ್ ಸಹಕರಿಸಿದರು.

ಸ್ವಚ್ಛ ಕಾರ್ಕಳ ಬ್ರಿಗೇಡ್, ವಿನಾಯಕ ಫ್ರೆಂಡ್ಸ್ ಕಾರ್ಕಳ ತಂಡವೂ ಜಾಥಾದಲ್ಲಿ ಭಾಗವಹಿಸಿತ್ತು. ಪ್ರಥಮ್ ಕಾಮತ್ ಅವರು ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಚಲಾಯಿಸುವ ಮೂಲಕ ನೆರೆದವರ ಗಮನ ಸೆಳೆದರು.































