ಹೆಬ್ರಿ : ಹೆಬ್ರಿ ಗ್ರಾ.ಪಂ. ಕಚೇರಿಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಹೆಬ್ರಿ ತಹಶೀಲ್ದಾರ್ ಕೆ. ಮಹೇಶ್ಚಂದ್ರ ಚಾಲನೆ ನೀಡಿದರು. ಹೆಬ್ರಿ ಗ್ರಾ.ಪಂ. ವ್ಯಾಪ್ತಿಯಲ್ಲಿನ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಗ್ರಾ.ಪಂ. ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಹೆಚ್. ಕೆ. ಸುಧಾಕರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿಜಯ ಮೊದಲಾದವರು ಉಪಸ್ಥಿತರಿದ್ದರು.
ಹೆಬ್ರಿ : ಸ್ವಚ್ಛತಾ ಕಾರ್ಯ

































































