ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಸಿಬಿಐ ಬಿಗ್ ಶಾಕ್ ನೀಡಿದೆ. ಡಿಕೆಶಿ ಹಾಗೂ ಅವರ ತಮ್ಮ ಸಂಸದ ಡಿ.ಕೆ. ಸುರೇಶ್ ಅವರ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಸಿಬಿಐ ಯ 5 ಮಂದಿಯ ತಂಡ ಈ ದಾಳಿ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸಿ ಡಿಕೆ ಶಿವಕುಮಾರ್ ನಂತರ ಜೈಲುವಾಸವನ್ನು ಅನುಭವಿಸಿದ್ದರು. ಡಿ.ಕೆ. ಶಿವಕುಮಾರ್ ರವರ ವಿರುದ್ದ ತನಿಖೆಯನ್ನು ನಡೆಸಲು ರಾಜ್ಯ ಸರಕಾರ ಅನುಮತಿಯನ್ನು ನೀಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಡಿ.ಕೆ.ಶಿ ಸಲ್ಲಿಸಿದ್ದ ಇನ್ನೊಂದು ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಬಾಕಿಯಿದೆ.































































































































































error: Content is protected !!
Scroll to Top