ಕಾಶ್ಮೀರದಲ್ಲಿ ಯೋಧರ ಮೇಲೆ ಉಗ್ರ ದಾಳಿ : ಇಬ್ಬರು ಹುತಾತ್ಮ

ಶ್ರೀನಗರ, ಅ. 5 : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಇಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಪಂಪೋರ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರಿಗೆ ಗಾಯಗಳಾಗಿತ್ತು, ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಮಾರ್ಗಮಧ್ಯೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಘಟನೆ ನಡೆದ ಬಳಿಕ ಭದ್ರತಾ ಸಿಬ್ಬಂದಿಗಳು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಲ್ಲಿಸಿದ್ದಾರೆ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.















































































































































error: Content is protected !!
Scroll to Top