ದಿಲ್ಲಿ, ಅ.13 : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವೇ ಗೆಲುವಿನ ಹಾರವನ್ನು ಧರಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯೊಂದು ತಿಳಿಸಿದೆ.
ಟೈಮ್ಸ್ ನೌ ಮತ್ತು ಸಿ ವೋಟರ್ ಜಂಟಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಶೇ.50ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ನಿರ್ವಹಣೆಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಅಂತೆಯೇ ಎನ್ ಡಿಎ ಮೈತ್ರಿಕೂಟವೇ ಗೆದ್ದು ನಿತೀಶ್ ಕುಮಾರ್ ಮರಳಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಅಂಶ ಈ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಅ.28 , ನ.3 ಮತ್ತು ನ. 7 ಹೀಗೆ ಮೂರು ಹಂತಗಳಲ್ಲಿ ಮತದಾನ ನಡೆದು ನ.10ರಂದು ಫಲಿತಾಂಶ ಪ್ರಕಟವಾಗಲಿದೆ.






























































