15-10-2020 : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
19-10-2020: ಸಂದರ್ಶನ
ಕಾರ್ಕಳ, ಅ.13 : ಕೊರೊನಾ ಸೋಂಕಿಗೊಳಗಾದವರಿಗೆ ಚಿಕಿತ್ಸೆ ನೀಡುತ್ತಿರುವ ಕಾರ್ಕಳ ಮತ್ತು ಕುಂದಾಪುರದ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ನೇಮಕಾತಿ ಮಾಡಲು ಆದೇಶ ಹೊರಡಿಸಲಾಗಿದೆ.

29 ಶುಶ್ರೂಷಕರು, 45 ಪ್ರಯೋಗಶಾಲಾ ತಂತ್ರಜ್ಞರು ಮತ್ತು 29 ಗ್ರೂಪ್ ಡಿ ಹುದ್ದೆಗಳನ್ನು 6 ತಿಂಗಳ ಮಟ್ಟಿಗೆ ಭರ್ತಿ ಮಾಡಿಕೊಳ್ಳಲಾಗುವುದು.
ಅ.15ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಧಿಕಾರಿ ಕಚೇರಿ, ಅಜ್ಜರಕಾಡು, ಉಡುಪಿ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಅ.19ರಂದು ಬೆಳಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದ್ದು, ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು.






























































