ಆತಂಕಗೊಳ್ಳಬೇಡಿ : ಪಿಯುಸಿ ಉಪನ್ಯಾಸಕರಿಗೆ ಸುರೇಶ್‌ ಕುಮಾರ್‌ ಭರವಸೆ

ಬೆಂಗಳೂರು, ಅ. 13: ನೇಮಕಾತಿ ಆದೇಶಕ್ಕಾಗಿ ಧರಣಿ ಕೂತಿರುವ ಪಿಯುಸಿ ಉಪನ್ಯಾಸಕರಾಗಿ ಆಯ್ಕೆಗೊಂಡು, ಕೌನ್ಸೆಲಿಂಗ್ ಸಹ ಪೂರ್ಣವಾಗಿರುವ ಉಪನ್ಯಾಸಕರಿಗೆ ಆತಂಕಗೊಳ್ಳುವುದು ಬೇಡ ಎಂದು ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್‌ ಭರವಸೆ ನೀಡಿದ್ದಾರೆ.

2019 ಆಗಸ್ಟ್ 21 ರಂದು, ಅಂದರೆ ನಾನು ಪ್ರಮಾಣ ವಚನ ಸ್ವೀಕರಿಸಿದ ಮಾರನೆಯ ದಿನ2015ರಿಂದ ವಿಳಂಬವಾಗುತ್ತಿದ್ದ ಈ ಉಪನ್ಯಾಸಕರ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡುವಂತೆ ಕ್ರಮ ತೆಗೆದುಕೊಂಡ ನಂತರ ಈ ವಿಚಾರ ಅನೇಕ ಅಡೆತಡೆಗಳನ್ನು ಎದುರಿಸಿತು.

 ನನ್ನ ಪ್ರತಿ ಪ್ರಯತ್ನ ಈ ಎಲ್ಲಾ ನೂತನ ಉಪನ್ಯಾಸಕರಿಗೆ ತಿಳಿದಿದೆ. ಆರ್ಥಿಕ ಇಲಾಖೆಯ ನಿರ್ಬಂಧ ಇದ್ದರೂ ಸಹ‌ ಇವರೆಲ್ಲರಿಗೂ ಕೌನ್ಸೆಲಿಂಗ್ ಪ್ರಕ್ರಿಯೆ ಸಹ ಪೂರ್ಣಗೊಳಿಸಲಾಗಿದೆ.ಈಗ ಕಾಲೇಜುಗಳು ಪ್ರಾರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು ಎಂದು ಈ ಎಲ್ಲ  ನೂತನ ಉಪನ್ಯಾಸಕರುಗಳಿಗೆ  ಮುಂಚೆಯೇ ತಿಳಿಸಲಾಗಿತ್ತು.‌

ಉಪನ್ಯಾಸಕರಾಗಿ ಆಯ್ಕೆಯಾಗಿ ಒಂದು ವರ್ಷದ ಒಳಗೆ ನೇಮಕಾತಿ ಆದೇಶ ದೊರೆಯದಿದ್ದರೆ ಆ ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ  ಆತಂಕ ಈ ನೂತನ ಉಪನ್ಯಾಸಕರಿಗಿದೆ.ಆದರೆ ಹೀಗೆ ಆತಂಕಪಡುವ ಅಗತ್ಯವಿಲ್ಲ.

 ಯಾವುದೇ ಉಪನ್ಯಾಸಕರ ಹುದ್ದೆಗಳಿಗೆ  ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ಬೇಕಾದರೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ಆಸ್ಪತ್ರೆಯಿಂದ ಮಾಡಿದ ಟ್ವೀಟ್‌ನಲ್ಲಿ ಸುರೇಶ್‌ ಕುಮಾರ್‌ ಹೇಳಿದ್ದಾರೆ.





























































































































error: Content is protected !!
Scroll to Top