ಬೆಂಗಳೂರು, ಅ. 17 : ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವುರಿಂದ ಕರಾವಳಿ ಸೇರಿ ರಾಜ್ಯದ ಕೆಲವು ಭಾಗಗಳಲ್ಲಿ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಹವಾಮಾನ ಕೇಂದ್ರದ ಮುನ್ಸೂಚನೆಯನ್ನನುಸರಿಸಿ ಉತ್ತರ ಮತ್ತು ದಕ್ಷಿಣದ ಕರಾವಳಿ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಲ ಮಳೆಗಾಲ ಅಕ್ಟೋಬರ್ ಅಂತ್ಯದವರೆಗೂ ಮುಂದುವರಿಯಲಿದೆ. ಅಕ್ಟೋಬರ್ ಅಂತ್ಯಕ್ಕೆ ಹಿಂಗಾರು ಪ್ರವೇಶಿಸಬೇಕಿದ್ದರೂ ವಾಯುಭಾರ ಕುಸಿತದಿಂದ ಮುಂಗಾರು ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಕೇಂದ್ರ ಹೇಳಿದೆ.














































































