ಚಳಿಗಾಲದಲ್ಲಿ ಕೊರೊನಾದ ಎರಡನೇ ಅಲೆ ಅಪ್ಪಳಿಸುವ ಸಾಧ್ಯತೆ : ವಿ. ಕೆ. ಪೌಲ್

ದಿಲ್ಲಿ, ಅ.18: ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಆರ್ಭಟ ತುಸು ಕಡಿಮೆಯಾಗಿದೆ. ಕೆಲವು ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಡೆ ಪರಿಸ್ಥಿತಿ ನಿಧಾನಕ್ಕೆ ಸುಧಾರಿಸುತ್ತಿದೆ. ಆದರೆ ಹಾಗೆಂದು ಸಮಾಧಾನಪಟ್ಟುಕೊಳ್ಳುವಂತಿಲ್ಲ.   ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್ ಹೇಳುವಂತೆ   ಚಳಿಗಾಲದಲ್ಲಿ ಕೊರೊನಾದ ಎರಡನೇ ಅಲೆ ಅಪ್ಪಳಿಸುವ  ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ತಜ್ಞರ ಸಮನ್ವಯ ಸಮಿತಿಯ ಮುಖ್ಯಸ್ಥರೂ ಆಗಿರುವ ಪೌಲ್,  ದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವಿನ ಪ್ರಕರಣಗಳ ಸಂಖ್ಯೆ ಕುಸಿದಿದೆ.ಆದರೂ ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸ್ ಗಢ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮತ್ತು ಮೂರ್ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಲೂ ಸೋಂಕು ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ದೇಶ ಈಗ ಸ್ವಲ್ಪ ಉತ್ತಮ ಸ್ಥಿತಿಯಲ್ಲಿದೆ. ಆದರೆ ಇನ್ನೂ ಬಹಳ ದೂರ ಸಾಗಬೇಕಿದೆ. ಯುರೋಪಿನ ರಾಷ್ಟ್ರಗಳಲ್ಲಿ ಕೊರೊನಾ  ಪ್ರಕರಣಗಳು ಮತ್ತೆ ಕಂಡುಬರುತ್ತಿರುವುದನ್ನು ನೋಡುತ್ತಿದ್ದೇವೆ.ದೇಶದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲಎಂದಿದ್ದಾರೆ.























error: Content is protected !!
Scroll to Top