ಮುಂಬಯಿ, ಅ. 21: ಮುಂಬಯಿಯ ಬಿಲ್ಲವರ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕಿನ ಸ್ಥಾಪಕಾಧ್ಯಕ್ಷ, ಬಿಲ್ಲವ ಸಮುದಾಯದ ಅಗ್ರಗಣ್ಯ ಜಯ ಸಿ. ಸುವರ್ಣ (74) ಅವರು ಅ.21 ರಂದು ನಿಧನರಾಗಿದ್ದಾರೆ.
ಕರ್ನಾಟಕ ರಾಜ್ಯೋತ್ಸವ, ಸಮಾಜ ರತ್ನ, ಉದ್ಯೋಗ ರತ್ನ ಸೇರಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಅವರು ತಮ್ಮ ಸಾಧನೆಗೆ ಪಡೆದುಕೊಂಡಿದ್ದರು.
ಅವರು ಪತ್ನಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಸೇರಿ ಅನೇಕ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.



































































