ಸುಬ್ರಹ್ಮಣ್ಯ, ಅ.22: ರಾಜ್ಯದಲ್ಲೇ ಅತ್ಯಧಿಕ ಆದಾಯವಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಭಾರೀ ಮೊತ್ತದ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ.
ಮಾನವ ಹಕ್ಕು ಹೋರಾಟಗಾರ ಸಿ.ಎನ್. ಶ್ರೀನಾಥ್ ಎಂಬವರು ದೇಗುಲದ ಆಡಳಿತ ಮಂಡಳಿ ಕೋಟ್ಯಂತರ ರೂಪಾಯಿ ಅವ್ಯವಹಾರ ಎಸಗಿದೆ ಎಂದು ಭ್ರಷ್ಟಾಚಾರ ನಿಗ್ರಹ ಪಡೆಗೆ ದೂರು ನೀಡಿದ್ದಾರೆ.
ದೇಗುಲದ ಆಡಳಿತಾಧಿಕಾರಿ ಎಂ.ಜೆ.ರೂಪಾ ಮತ್ತು ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಅವರ ವಿರುದ್ಧ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ. ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಮತ್ತು ವಿಗ್ರಹಗಳು ನಾಪತ್ತೆಯಾಗಿವೆ ಎಂದು ದೂರಿನಲ್ಲಿ ಹೇಳಲಾಗಿದೆ.












