ಬೆಂಗಳೂರು, ಅ. 22: ಈಗಾಗಲೇ ಹಲವು ಸಲ ಮುಂದೂಡಿಕೆಯಾಗಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ನ.5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇಂದೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಳೆದ ಸಾಲಿನಲ್ಲಿ ಕಡ್ಡಾಯ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಕರಿಗೆ ಮೊದಲ ಆದ್ಯತೆ ಸಿಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪಟ್ಟಿ ಹಾಗೂ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

































