115 ಕೋ. ರೂ. ವೆಚ್ಚದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ

ಉಡುಪಿ, ಅ.22 : ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ಅ. 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿದೆ. ಈ ನಿರ್ಧಾರಕ್ಕೆ ಉಡುಪಿಯ ಶಾಸಕ  ಕೆ. ರಘುಪತಿ ಭಟ್ ಸಂತಸ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯಾಗಿ 23 ವರ್ಷಗಳು ಕಳೆದಿದ್ದು, ಉಡುಪಿ ಜನತೆಯ ಬಹು ಬೇಡಿಕೆಯ ಈ ಯೋಜನೆಗೆ ಅನುಮೋದನೆ ನೀಡಿರುವುದು ಐತಿಹಾಸಿಕ ನಿರ್ಣಯವಾಗಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

115  ಕೋ. ರೂ. ವೆಚ್ಚದಲ್ಲಿ ಕಟ್ಟಡ ಮತ್ತು 250 ಬೆಡ್ ಆಸ್ಪತ್ರೆಗೆ ಬೇಕಾದಷ್ಟು ಸಿಬ್ಬಂದಿ, ಪೀಠೋಪಕರಣಗಳು ಸೇರಿದಂತಹ ಈ ಬೃಹತ್ ಯೋಜನೆಗೆ ಇದು.  

ಆದಷ್ಟು ಶೀಘ್ರವಾಗಿ ಈ ಯೋಜನೆ ಕಾರ್ಯಗತಗೊಳಿಸಿ ಜನತೆಗೆ ಅನೂಕೂಲ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದು ರಘುಪತಿ ಭಟ್‌ ಹೇಳಿದ್ದಾರೆ.

ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸಹಕರಿಸಿದ ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಸುಧಾಕರ್ ಹಾಗೂ ಆರ್ಥಿಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.









































































































error: Content is protected !!
Scroll to Top