ದಿಲ್ಲಿ, ಅ.26: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮೆನೇಜರ್ ದಿಶಾ ಸಾಲ್ಯಾನ್ ಅವರ ನಿಗೂಢ ಸಾವಿನ ಪ್ರಕರಣದ ಕುರಿತು ನ್ಯಾಯಾಲಯದ ಕಣ್ಗಾವಲಿನಲ್ಲಿ ಸಿಬಿಐ ತನಿಖೆ ನಡೆಯಬೇಕೆಂದು ಅರ್ಜಿ ಸಲ್ಲಿಸಿದ ಕಕ್ಷಿದಾರರಿಗೆ ಬಾಂಬೆ ಹೈಕೋರ್ಟ್‌ಗೆ ಹೋಗಲು ಸುಪ್ರೀಂ ಕೋರ್ಟ್ ಸೂಚಿಸಿದೆ.
ದಿಶಾ ಸಾಲ್ಯಾನ್ ಜೂ. 8 ರಂದು ಮಲಾಡ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದ ಮೇಲಿನಿಂದ ಬಿದ್ದು ಸಾವನ್ನಪ್ಪಿದ್ದಾರೆ.ಇದಾದ ಆರು ದಿನಗಳಲ್ಲಿ ಅಂದರೆ ಜೂ.14ರಂದು ಸುಸಾಂತ್ ಸಿಂಗ್ ರಜಪೂತ್ ಬಾಂದ್ರಾದಲ್ಲಿರುವ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸುಶಾಂತ್ ಮತ್ತು ದಿಶಾ ಸಾವುಗಳು ನಿಗೂಢವಾಗಿ ಸಂಭವಿಸಿದ್ದು, ಎರಡು ಸಾವುಗಳಿಗೆ ಪರಸ್ಪರ ಸಂಬಂಧವಿದೆ. ಹೀಗಾಗಿ ಈ ಸಾವುಗಳ ತನಿಖೆಯನ್ನು ನ್ಯಾಯಾಲಯದ ಕಣ್ಗಾವಲಿನಲ್ಲಿ ಸಿಬಿಐ ನಡೆಸಬೇಕೆಂದು ಆಗ್ರಹಿಸಿ ವಕೀಲ ಪುನೀತ್ ದಾಂಡ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಎಸ್. ಎ. ಬೋಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಹೇಳಿದೆ.
ದಿಶಾ ಸಾಲ್ಯಾನ್ ನಿಗೂಢ ಸಾವು : ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ







































