ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ, ನಂದಳಿಕೆ -ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದಲ್ಲಿ ನ. 1ರಂದು 65ನೇ ಕನ್ನಡ ರಾಜೋತ್ಸವ ಕಾರ್ಯಕ್ರಮ ನಡೆಯಲಿದೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೇಲಾಡಿ ಎಂ. ವಿಠಲ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ಸಾಹಿತಿ ಬೆಳ್ಮಣ್ ಅನುಬೆಳ್ಳೆ, ನಂದಳಿಕೆ -ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಬೋಳ ಉದಯ ಅಂಚನ್, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ಮಣ್ ಹೋಬಳಿ ಘಟಕದ ಅಧ್ಯಕ್ಷ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಲಿಯೋ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿವರು.
ಸನ್ಮಾನ
ಯುವ ಸಾಹಿತಿ ಇಂದುಚೇತನ ಬೋರುಗುಡ್ಡೆಯವರಿಗೆ ಸನ್ಮಾನ, ಶರತ್ ದೇವಾಡಿಗ ಮತ್ತು ಕುಮಾರಿ ನೀಯಾ ಶೆಟ್ಟಿಯವರಿಂದ ‘ಕನ್ನಡ ಗೀತಾ ಗಾಯನ’ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ್ ಕೊಂಡಳ್ಳಿ ತಿಳಿಸಿದರು.