ಅ.31 ರಂದು ನಿಟ್ಟೆ ತಾಂತ್ರಿಕ ಮಹಾ ವಿದ್ಯಾಲಯದ ಪದವಿ ಪ್ರದಾನ

0

ಕಾರ್ಕಳ, ಅ. 29 : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2019-2020 ನೇ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭ ಅ. 31 ರಂದು ಬೆಳಗ್ಗೆ 10 ಗಂಟೆಗೆ ನಿಟ್ಟೆಯ ಸಂಭ್ರಮ ಸಭಾಂಗಣದಲ್ಲಿ ನಡೆಯಲಿದೆ.
ವಿ.ಟಿ.ಯು ಎಕಾಡೆಮಿಕ್ ಸೆನೇಟ್ ಮೆಂಬರ್ ಹಾಗೂ ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್‍ನ ಪ್ರಾಂಶುಪಾಲ ಡಾ.ಅಬ್ದುಲ್ ಶರೀಫ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿರುವರು.
ಕೊರೊನಾ ಕಾರಣ ಈ ಬಾರಿಯ ಪದವಿ ಪ್ರದಾನ ಸಮಾರಂಭದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಿ.ಇ, ಎಂ.ಟೆಕ್ ಹಾಗೂ ಎಂ.ಸಿ.ಎ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಪದವಿ ಪ್ರದಾನ ಮಾಡಲಾಗುವುದು. ಶೈಕ್ಷಣಿಕ ಸಾಧನೆಗೈದ 33 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಗುರುತಿಸಲಾಗುವುದು. ಪ್ರತಿ ವರ್ಷದಂತೆ ಈ ಕಾರ್ಯಕ್ರಮವನ್ನು ಲೈವ್ ವೆಬ್‍ಕಾಸ್ಟ್ ಮಾಡುವ ಯೋಜನೆಯನ್ನು ಸಂಸ್ಥೆಯು ರೂಪಿಸಿದ್ದು, ಕಾರ್ಯಕ್ರಮದ ಲೈವ್ ವೀಕ್ಷಣೆಗಾಗಿ nmamit.nitte.edu.in ಲಿಂಕ್‍ನ್ನು ಉಪಯೋಗಿಸಬಹುದಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಫ್ರಾನ್ಸ್‌ ನಲ್ಲಿ ಮತ್ತೆ ಭಯೋತ್ಪಾದಕ ದಾಳಿ : ಮಹಿಳೆಯ ಶಿರಚ್ಛೇದ, ಇನ್ನಿಬ್ಬರ ಹತ್ಯೆ
Next articleಆರೋಗ್ಯ ಧಾರಾ – ದೇಹ ಪ್ರಕೃತಿ

LEAVE A REPLY

Please enter your comment!
Please enter your name here