ದಿಲ್ಲಿ,, ನ.1: ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಮಸ್ತ ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ಟ್ವಿಟ್ ಮಾಡಿ, ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯೋತ್ಸವ’ದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಕರ್ನಾಟಕ ಸದಾ ಮಹತ್ವದ ಪಾತ್ರವನ್ನು ನಿಭಾಯಿಸುತ್ತಾ ಬಂದಿದೆ. ಮುಂಬರುವ ವರ್ಷಗಳಲ್ಲೂ ರಾಜ್ಯ ಮತ್ತಷ್ಟು ಸಮೃದ್ಧಿ ಹೊಂದಿ ಪ್ರಗತಿ ಸಾಧಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
