Homeಸ್ಥಳೀಯ ಸುದ್ದಿನ. 8 : ಮಿತ್ರಪ್ರಭಾ ಹೆಗ್ಡೆ ಅವರಿಗೆ ಅಭಿನಂದನಾ ಕಾರ್ಯಕ್ರಮ

Related Posts

ನ. 8 : ಮಿತ್ರಪ್ರಭಾ ಹೆಗ್ಡೆ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಕಾರ್ಕಳದ ಪ್ರತಿಷ್ಠಿತ ಎಸ್.ವಿ.ಟಿ. ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಬಳಿಕ ಪ್ರಾಂಶುಪಾಲರಾಗಿ ಒಟ್ಟು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಮಿತ್ರ ಪ್ರಭಾ ಹೆಗ್ಡೆ ಅವರ ಅಭಿನಂದನಾ ಕಾರ್ಯಕ್ರಮ ನ. 8ರಂದು ಹೊಟೇಲ್‌ ಪ್ರಕಾಶ್‌ ಸಂಭ್ರಮ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಸಂಜೆ ನಾಲ್ಕು ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ವಹಿಸಲಿದ್ದು, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್, ಮುನಿಯಾಲು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೇಬಿ ಡಿ. ಆಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಿತ್ರ ಪ್ರಭಾ ಹೆಗ್ಡೆ ಅವರ ವಿದ್ಯಾರ್ಥಿಗಳು ಮತ್ತು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

Latest Posts

error: Content is protected !!