Homeರಾಜ್ಯಕಾಫಿ ಡೇ ಮಾಲಕ ದಿ.ಸಿದ್ದಾರ್ಥ್ ಪತ್ನಿಗೆ ಬಂಧನ ಭೀತಿ

Related Posts

ಕಾಫಿ ಡೇ ಮಾಲಕ ದಿ.ಸಿದ್ದಾರ್ಥ್ ಪತ್ನಿಗೆ ಬಂಧನ ಭೀತಿ

ಬೆಂಗಳೂರು, ನ.4 : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕಾ ಸಿದ್ಧಾರ್ಥ್ ಸೇರಿ 8 ಮಂದಿಯ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ JMFC ಕೋರ್ಟ್ ನಿಂದ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿದೆ. ಸಿದ್ಧಾರ್ಥ್ ಒಡೆತನದ ಎಬಿಸಿ ಸಂಸ್ಥೆಗೆ ಕಾಫಿ ಬೆಳೆಯನ್ನು ನೀಡಿದ್ದ ಸುಮಾರು 300ಕ್ಕೂ ಹೆಚ್ಚು ಬೆಳೆಗಾರರಿಗೆ ಸಂಸ್ಥೆ ಹಣ ಪಾವತಿಸಿರಲಿಲ್ಲ. 100 ಕೋಟಿಗೂ ಅಧಿಕ ಹಣವನ್ನು ಬೆಳೆಗಾರರಿಗೆ ನೀಡದೆ ಬಾಕಿ ಉಳಿಸಿಕೊಳ್ಳಲಾಗಿತ್ತು. ಹೀಗಾಗಿ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಎಂಬುವವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳವಿಕಾ ಸಿದ್ಧಾರ್ಥ್ ಒಳಗೊಂಡು 8 ಮಂದಿಗೆ ವಾರಂಟ್ ಜಾರಿಯಾಗಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!