ಮಂಗಳೂರು, ನ.5 : ಮದುವೆಗಾಗಿ ಮತಾಂತರ ಮಾಡುವ ಹುನ್ನಾರವನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು ಹೆಣ್ಣು ಮಕ್ಕಳನ್ನು ಹಣದ ಆಮಿಷವೊಡ್ಡಿ, ಪ್ರೇಮದ ನಾಟಕವಾಡಿ ಮತಾಂತರಿಸಿ ಮದುವೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಕುರಿತು ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ.
ಬೇರೆ ರಾಜ್ಯದಲ್ಲಿ ಏನೋ ಮಾಡುತ್ತಾರೋ ಗೊತ್ತಿಲ್ಲ. ನಮ್ಮ ರಾಜ್ಯದಲ್ಲಿ ಕಠಿಣ ಕಾನೂನು ರಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮತಾಂತರ ಸಹಿಸುವುದಿಲ್ಲ : ಯಡಿಯೂರಪ್ಪ






































































