ಬೆಂಗಳೂರು, ನ.5 : ರಾಜ್ಯದಲ್ಲಿರುವ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲು ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.
ಹರ್ಷ ಮುತಾಲಿಕ್ ಎಂಬ ವಕೀಲರು ಮಸೀದಿಗಳಲ್ಲಿರುವ ಧ್ವನಿವರ್ಧಕಗಳಲ್ಲಿ ದಿನಕ್ಕೆ ಐದು ಬಾರಿ ಆಜಾನ್ ಕೂಗುವುದರಿಂದ ಇತರ ಧರ್ಮದವರಿಗೆ ತೊಂದರೆಯಾಗುತ್ತಿದೆ. ಮಕ್ಕಳಿಗೆ, ವೃದ್ಧರಿಗೆ ಮತ್ತು ಹೃದಯ ಸಮಸ್ಯೆಯಿರುವವರಿಗೆ ಆರೋಗ್ಯದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಈ ದೂರನ್ನು ಪರಿಗಣಿಸಿ ಪ್ರವೀಣ್ ಸೂದ್ ಅವರು ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
