Wednesday, October 27, 2021
spot_img
Homeರಾಜ್ಯಗ್ರಾಮ ಪಂಚಾಯತ್‌ ಚುನಾವಣೆ ಫೆಬ್ರವರಿಗೆ ಮುಂದೂಡಿಕೆ ಸಾಧ್ಯತೆ?

ಗ್ರಾಮ ಪಂಚಾಯತ್‌ ಚುನಾವಣೆ ಫೆಬ್ರವರಿಗೆ ಮುಂದೂಡಿಕೆ ಸಾಧ್ಯತೆ?

ಈಗ ಚುನಾವಣೆ ನಡೆಸಿದರೆ ಕೊರೊನಾ ಸೋಂಕು ಹೆಚ್ಚಾಗಬಹುದು ಎಂದು ವರದಿ ನೀಡಿದ ತಜ್ಞರ ಸಮಿತಿ

ಬೆಂಗಳೂರು, ನ.6:ಎರಡು ಕ್ಷೇತ್ರಗಳ ಉಪ ಚುನಾವಣೆ ಕೊರೊನಾ ಭೀತಿಯ ನಡುವೆಯೇ ನಿರಾತಂಕವಾಗಿ ಮುಕ್ತಾಯವಾಗಿದ್ದರೂ ಗ್ರಾಮ ಪಂಚಾಯತ್‌ ಚುನಾವಣೆ ನಡೆಯುವುದು ಮಾತ್ರ ಖಾತರಿಯಿಲ್ಲ. ಸರಕಾರ ಇನ್ನೂ ಈ ಕುರಿತು ಸರಿಯಾದ ನಿರ್ಧಾರಕ್ಕೆ ಬಂದಿಲ್ಲ. ಈ ನಡುವೆ ತಜ್ಞರ ಸಮಿತಿ ಗ್ರಾಮ ಪಂಚಾಯತ್‌ ಚುನಾವಣೆಯನ್ನು ಮುಂಬರುವ ಫೆಬ್ರವರಿಗೆ ಮುಂದೂಡುವುದು ಒಳ್ಳೆಯದು ಎಂದು ಹೇಳಿದೆ. ಪಂಚಾಯತ್‌ ಚುನಾವಣೆ ನಡೆಸುವ ಸಾಧಕಬಾಧಕಗಳನ್ನು ಅಧ್ಯಯನ ನಡೆಸುವ ಸಲುವಾಗಿ ಸರಕಾರ ನೇಮಿಸಿದ್ದ ಡಾ.ಎಂ.ಕೆ ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದಿದೆ.
ಚುನಾವಣೆ ನಡೆಸುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ. ನಾವು ಚುನಾವಣೆ ನಡೆಸಿದ್ದೇ ಆದರೆ ಕೊರೊನಾ ಸೋಂಕನ್ನು ನಾವೇ ಮನೆ ಬಾಗಿಲಿಗೆ ತಂದು ಕೂರಿಸಿದಂತಾಗುತ್ತದೆ ಎಂದು ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆ ನಡೆಸಿದರೆ ಮನೆಮನೆಗೆ ಕೋವಿಡ್ ತಲುಪಿಸಿದಂತೆ ಆಗುತ್ತದೆ. ಫೆಬ್ರವರಿವರೆಗೆ ಚುನಾವಣೆ
ಮುಂದೂಡುವುದು ಒಳಿತು ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ಸಚಿವ ಕೆ. ಸುಧಾಕರ್‌ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸ ಬೇಕಾಗುತ್ತದೆ, ಇದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಗ್ರಾಮ ಪಂಚಾಯಿತಿ ಚುನಾವಣೆಯನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿತ್ತು, ಸದ್ಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಕೋರ್ಟ್ ಮತ್ತು ಆಯೋಗ ಚುನಾವಣಾ ದಿನಾಂಕವನ್ನು ನಿಗದಿ ಪಡಿಸಲಿದೆ, ಆದರೆ ನಾವು ಚುನಾವಣೆಯನ್ನು ಫೆಬ್ರವರಿಗೆ ಮುಂದೂಡುವಂತೆ ಮನವಿ ಮಾಡಿದ್ದೇವೆ ಎಂದು ಸುಧಾಕರ್ ತಿಳಿಸಿದ್ದಾರೆ.
ಈ ಚುನಾವಣೆಗಳ ನಂತರ ಗ್ರಾಮೀಣ ಪ್ರದೇಶಗಳಲ್ಲಿನ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಬಹುದು ಎಂದು ತಜ್ಞರ ಸಮಿತಿ ತಿಳಿಸಿದೆ. 50,000 ಕ್ಕೂ ಹೆಚ್ಚು ಬೂತ್‌ಗಳನ್ನು ಸ್ಥಾಪಿಸಬೇಕಾಗಿದ್ದು, ರಾಜ್ಯದ ಎಲ್ಲಾ 6,021 ಪಂಚಾಯಿತಿಗಳಿಂದ ಲಕ್ಷಾಂತರ ಜನರು ಸ್ಪರ್ಧಿಸಲಿದ್ದಾರೆ. ಈ ವೇಳೆ ಜನರು ಸಾಮಾಜಿಕ ಅಂತರ ಕಾಪಾಡುವುದು ಕಷ್ಟ.
ಸೋಂಕು ಹರಡುವಿಕೆಯನ್ನು ತಡೆಗಟ್ಟಲು ನಾವು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ. ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆಗಳಲ್ಲಿ ಅನೇಕ ಜನರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ನಾವು ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ ”ಎಂದು ಸುಧಾಕರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!