Homeರಾಜ್ಯರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ನಿಷೇಧ

Related Posts

ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ನಿಷೇಧ

ಬೆಂಗಳೂರು, ನ.6 : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸರಕಾರ ಹೇಳಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುದ್ದಿಗಾರರ ಜೊತೆಗೆ ಮಾತನಾಡಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸುಡುವುದನ್ನು ನಿಷಠಧಿಸಿರುವ ವಿಚಾರ ತಿಳಿಸಿದರು. ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಹಾಗೂ ಪಟಾಕಿ ಸುಡುವಂತಿಲ್ಲ. ಈ ಸಂಬಂಧ ಶೀಘ್ರವೇ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರದ ನಿರ್ಧಾರದಿಂದ ಪಟಾಕಿ ಮಾರಾಟಾರರಿಗೆ ಮತ್ತು ಪಟಾಕಿ ಖರೀದಿಸಿದ್ದವರಿಗೆ ಶಾಕ್ ಉಂಟಾಗಿದೆ.
ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿರುವ ನಿರ್ಧಾರಕ್ಕೆ ಪರ ಹಾಗೂ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೆ ಸಂಪ್ರದಾಯವಾದಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ. ಪಟಾಕಿ ಸಿಡಿಸುವುದರಿಂದ ಪರಿಸರ ಹಾನಿ ಆಗುತ್ತದೆ ಎಂದರೆ ಪರಿಸರಕ್ಕೆ ಹಾನಿಯಾಗುವ ಎಲ್ಲವನ್ನೂ ನಿಷೇಧ ಮಾಡಿ ಎಂಬುವುದು ಸಂಪ್ರದಾಯವಾದಿಗಳ ವಾದವಾಗಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!