Wednesday, October 27, 2021
spot_img
Homeರಾಜ್ಯಅಕ್ರಮ ಆಸ್ತಿ ಸಂಪಾದನೆ ಆರೋಪ: ಕೆಎಎಸ್‌ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಕೆಎಎಸ್‌ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಉಡುಪಿ, ನ.7: ಆಕ್ರಮ ಆಸ್ತಿ ಗಳಿಸಿದ ಆರೋಪದಲ್ಲಿ ಕೆಎಎಸ್‌ ಅಧಿಕಾರಿ ಡಾ. ಬಿ. ಸುಧಾ ಅವರಿಗೆ ಸೇರಿದ ಉಡುಪಿಯ ಹೆಬ್ರಿಯಲ್ಲಿ ಮತ್ತು ಬೆಂಗಳೂರಿನಲ್ಲಿರುವ ಮನೆ ಹಾಗೂ ಫ್ಲಾಟ್‌ಗಳಿಗೆ ಭ್ರಷ್ಟಾಚಾರ ನಿಗ್ರಹ ಪಡೆ ಇಂದು ದಾಳಿ ನಡೆಸಿದೆ.
ಬೆಂಗಳೂರಿನ ಮನೆ, ಕಚೇರಿ ಹಾಗೂ ಉಡುಪಿಯಲ್ಲಿರುವ ಒಂದು ಮನೆ ಸೇರಿ ಆರು ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಡಾ. ಸುಧಾ ಅವರು ಮನೆಗಳು, ಫ್ಲಾಟ್‌ ಗಳು ಸೇರಿ ಕೋಟ್ಯಂತರ ರೂಪಾಯಿ ಆಸ್ತಿ ಸಂಪಾದಿಸಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿಯಾಗಿರುವ ಡಾ. ಸುಧಾ ಅವರು ಬಿಡಿಎಯಲ್ಲಿ ಭೂ ಸ್ವಾಧೀನ ಅಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಎಸಗಿದ್ದಾರೆಂದು ದೂರು ನೀಡಲಾಗಿತ್ತು. ಡಾ.ಸುಧಾ ತಮ್ಮ ಬಲ್ಲ ಆದಾಯ ಮೂಲಕ್ಕಿಂತ ಹೆಚ್ಚಿನ ಸೊತ್ತುಗಳನ್ನು ಹೊಂದಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಎಸಿಬಿಗೆ ದೂರು ನೀಡಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!