Sunday, October 17, 2021
spot_img
Homeರಾಜ್ಯಹಸಿರು ಪಟಾಕಿಗೆ ಓಕೆ ಎಂದ ಸರಕಾರ

ಹಸಿರು ಪಟಾಕಿಗೆ ಓಕೆ ಎಂದ ಸರಕಾರ

ಬೆಂಗಳೂರು, ನ.7 : ಕೊರೊನಾ ಹರಡುವ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧಿಸುವ ನಿರ್ಧಾರಕ್ಕೆ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಬಳಿಕ ಸರಕಾರ ಈ ಆದೇಶಕ್ಕೆ ತುಸು ಮಾರ್ಪಾಡು ಮಾಡಿದೆ. ಹೆಚ್ಚು ವಾಯುಮಾಲಿನ್ಯ ಉಂಟು ಮಾಡದ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡುವಂತೆ ಪರಿಷ್ಕೃತ ಪ್ರಕಟಣೆ ಹೊರಡಿಸಿದೆ.
ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ. ಈ ಹಿನ್ನೆಲೆಯಲ್ಲಿ ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ ಹಾಗೂ ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿ ಯಡಿಯೂರಪ್ಪ ಅವರು ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವ ತೀರ್ಮಾನಕ್ಕೆ ಬರಲಾಗಿದೆ. ಈ ಸಂಬಂಧ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದರು. ಆದರೆ, ಸಾರ್ವಜನಿಕವಲಯದಲ್ಲಿ ಟೀಕೆ ಟಿಪ್ಪಣಿ ಕೇಳಿ ಬಂದ ಕಾರಣ ಸಂಜೆ ವೇಳೆ ಹಸಿರು ಪಟಾಕಿಯನ್ನು ಮಾತ್ರ ಬಳಸಬಹುದು ಎಂದು ಲಿಖಿತ ಹೇಳಿಕೆ ನೀಡಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!