ಕಾರ್ಕಳ, ನ. 7 : ಜೆಡಿಎಸ್ ಪಕ್ಷದ ಕಾರ್ಕಳ ಕ್ಷೇತ್ರಾಧ್ಯಕ್ಷರಾಗಿ ಕುಚ್ಚೂರು ಶ್ರೀಕಾಂತ್ ಪೂಜಾರಿ ಅವರನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಶಿಫಾರಸ್ಸಿನ ಮೇರೆಗೆ ಜಿಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ನೇಮಕ ಮಾಡಿದ್ದಾರೆ. ಜೆಡಿಎಸ್ ಕಾರ್ಕಳ ಕ್ಷೇತ್ರದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಕುಚ್ಚೂರು ಶ್ರೀಕಾಂತ್ ಪೂಜಾರಿ ಕಾರ್ಕಳ ಕೆಡಿಪಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಜೆಡಿಎಸ್ ಕಾರ್ಕಳ ಕ್ಷೇತ್ರಾಧ್ಯಕ್ಷರಾಗಿ ಕುಚ್ಚೂರು ಶ್ರೀಕಾಂತ್ ಪೂಜಾರಿ ಆಯ್ಕೆ









































































