Wednesday, October 27, 2021
spot_img
Homeದೇಶದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸೆಂಥಿಲ್‌ ಕಾಂಗ್ರೆಸ್‌ಗೆ?

ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸೆಂಥಿಲ್‌ ಕಾಂಗ್ರೆಸ್‌ಗೆ?

ಚೆನ್ನೈ,ನ.8 : ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ದೂರಿ ಐಎಎಸ್ ಸೇವೆಗೆ ರಾಜೀನಾಮೆ ನೀಡಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಶೀಘ್ರವೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಸೋಮವಾರ ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2019ರ ಸೆ.6 ರಂದು ರಾಜೀನಾಮೆ ಸಲ್ಲಿಸಿದ ನಂತರ ಸೆಂಥಿಲ್ ಸಿಎಎ, ಎನ್ ಆರ್ ಸಿ ವಿರುದ್ಧ ಪ್ರತಿಭಟನೆಯಲ್ಲಿಸಕ್ರಿಯವಾಗಿದ್ದರು.ತಮಿಳುನಾಡಿನವರಾದ ಸೆಂಥಿಲ್ ಇದೀಗ ಚೆನ್ನೈನಲ್ಲಿ ಇದ್ದಾರೆ.
ಇತ್ತೀಚೆಗೆ ಜನಪ್ರಿಯ ಐಪಿಎಸ್‌ ಅಧಿಕಾರಿಯಾಗಿದ್ದ ಅಣ್ಣಾಮಲೈ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಸೇರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!