Wednesday, October 27, 2021
spot_img
Homeರಾಜ್ಯ10 ದಿನ ಮಾತ್ರ ಪಟಾಕಿ ಮಾರಾಟ

10 ದಿನ ಮಾತ್ರ ಪಟಾಕಿ ಮಾರಾಟ

ಬೆಂಗಳೂರು,ನ.9 : ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಇನ್ನೊಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಎರಡು ದಿನಗಳ ಹಿಂದೆ ಹಸಿರು ಪಟಾಕಿ ಮಾತ್ರ ಹೊತ್ತಿಸಬೇಕೆಂದು ಹೇಳಿದ್ದ ಸರಕಾರ ಇದೀಗ ಬರೀ 10 ದಿನ ಮಾತ್ರ ಹಸಿರು ಪಟಾಕಿಗಳನ್ನು ಮಾರಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿದೆ. ಹೀಗೆ ದಿನಕ್ಕೊಂದು ಆದೇಶ ನೀಡುವುದರಿಂದ ಈಗಾಗಲೇ ಹಬ್ಬಕ್ಕಾಗಿ ಪಟಾಕಿ ದಾಸ್ತಾನು ಇಟ್ಟಿರುವ ವ್ಯಾಪಾರಿಗಳು ಕಂಗಾಲಾಗಿದ್ದಾರೆ.
ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ ಮಾರಾಟಕ್ಕೆ ಅವಕಾಶವಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ್ ಭಾಸ್ಕರ್, ಜಿಲ್ಲಾಧಿಕಾರಿಗಳು, ಎಸ್ಪಿಗಳು, ಬೆಂಗಳೂರು ಸಿಟಿ ಪೊಲೀಸ್ ಆಯುಕ್ತರು, ಬಿಬಿಎಂಪಿಗಳಿಗೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ಕೊಟ್ಟಿದೆ. ಮಾರ್ಗಸೂಚಿ ಈ ರೀತಿ ಇದೆ:
-ಪಟಾಕಿ ಮಾರಾಟ ಮಾಡುವ ಸ್ಥಳದಲ್ಲಿ ಸಾಕಷ್ಟು ಗಾಳಿ ಬೆಳಕು ಇರಬೇಕು
-ಅಂಗಡಿಯನ್ನು ಪ್ರತಿದಿನ ಸ್ಯಾನಿಟೈಸ್ ಮಾಡುತ್ತಿರಬೇಕು
-ಥರ್ಮಲ್ ಸ್ಕ್ರೀನಿಂಗ್ ಮತ್ತು ಗ್ರಾಹಕರಿಗೆ ಕೈಯನ್ನು ಸ್ಯಾನಿಟೈಸ್ ಮಾಡಿಕೊಳ್ಳುವ ವ್ಯವಸ್ಥೆ ಇರಬೇಕು.
-ಮಾರಾಟಗಾರರು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
-ಪಟಾಕಿ ಮಾರುವ ಅಂಗಡಿಗಳ ಮಧ್ಯೆ ಕನಿಷ್ಠ 6 ಮೀಟರ್ ಅಂತರವಿರಬೇಕು

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!