ಬೆಂಗಳೂರು, ನ.9: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯ 14 ದಿನಗಳ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ವಿನಯ್ ಕುಲಕರ್ಣಿಗೆ ನವೆಂವರ್ 23 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಧಾರವಾಡದ ಮೂರನೇ ಹೆಚ್ಚುವರಿ ಸೆಷೆನ್ಸ್ ಕೋರ್ಟ್ ಆದೇಶಿಸಿದೆ. ವಿನಯ್ ಕುಲಕರ್ಣಿಯವರ ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಸಿಬಿಐ ಮಾಜಿ ಸಚಿವರನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿತ್ತು. ಆದರೆ ಕೋರ್ಟ್ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ
























































































