ಎಂ.ಪಿ.ಎಂ. ಕಾಲೇಜಿನಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಮಾಹಿತಿ

ಕಾರ್ಕಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಎನ್.ಎಸ್.ಎಸ್., ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀವರ್ಮ ಅಜ್ರಿ ಎಂ. ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಕಳ ತಾಲೂಕು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಪ್ರಕಾಶ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯ ಬಾಯಿ ಕೆ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಮೂರ್ತಿ ವೈದ್ಯ, ಗ್ರಂಥಪಾಲಕರ ವೆಂಕಟೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿ ನವೀನ್ ಸ್ವಾಗತಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್. ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ರಾವ್ ವಂದಿಸಿದರು.

Latest Articles

error: Content is protected !!