Wednesday, October 27, 2021
spot_img
Homeರಾಜ್ಯಡಬಲ್‌ ಎಂಜಿನ್‌ ಸರಕಾರದಿಂದ ಡಬಲ್‌ ಶಾಕ್‌ : ರಾಜ್ಯ ಸರಕಾರದ ಕಾಲೆಳೆದ ಸುರ್ಜೆವಾಲಾ

ಡಬಲ್‌ ಎಂಜಿನ್‌ ಸರಕಾರದಿಂದ ಡಬಲ್‌ ಶಾಕ್‌ : ರಾಜ್ಯ ಸರಕಾರದ ಕಾಲೆಳೆದ ಸುರ್ಜೆವಾಲಾ

ಬೆಂಗಳೂರು,ನ.9 : ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಏರಿಕೆ ಮಾಡುವ ಮೂಲಕ ರಾಜ್ಯ ಬಿ.ಎಸ್‌. ಯಡಿಯೂರಪ್ಪ ಸರ್ಕಾರ ಜನರಿಗೆ ಡಬಲ್ ಶಾಕ್ ನೀಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ ‘ಡಬಲ್ ಶಾಕ್‌’ ಕೊಡಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!