Wednesday, October 27, 2021
spot_img
Homeದೇಶಉಪ ಚುನಾವಣೆ : ಗುಜರಾತ್‌, ಮಧ್ಯಪ್ರದೇಶ, ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ

ಉಪ ಚುನಾವಣೆ : ಗುಜರಾತ್‌, ಮಧ್ಯಪ್ರದೇಶ, ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ

ದಿಲ್ಲಿ, ನ.10: ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿದ್ದ ಮತದಾನದ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಗುಜರಾತ್ ನ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.
ಮಧ್ಯ ಪ್ರದೇಶದಲ್ಲಿ ಸರ್ಕಾರ ಉಳಿಸಿಕೊಳ್ಳಲು ಈ ಉಪ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 8 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿದೆ. ಮಧ್ಯ ಪ್ರದೇಶದಲ್ಲಿ ಮ್ಯಾಜಿಕ್ ನಂಬರ್ 229 ಆಗಿದೆ. ಪ್ರಸ್ತುತ ಬಿಜೆಪಿ ಬಳಿ 107 ಶಾಸಕರ ಬೆಂಬಲವಿದ್ದು, ಕಾಂಗ್ರೆಸ್ 87 ಶಾಸಕರನ್ನು ಹೊಂದಿದೆ.
ಹರ್ಯಾಣದ ಬರಾಡಾದಲ್ಲಿ ಈ ವರೆಗೂ 20 ಸುತ್ತಿನ ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ನಿಧನದಿಂದಾಗಿ ಉಪ ಚುನಾವಣೆ ನಡೆಯುತ್ತಿದೆ.
ಕರ್ನಾಟಕದ ಆರ್ ಆರ್ ನಗರ ಮತ್ತು ಶಿರಾದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಮತ್ತು ಸಿಎಂ ರಾಜೇಶ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರು ಮುನ್ನಡೆ ಸಾಧಿಸಿದ್ದು, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಹಿನ್ನಡೆ ಸಾಧಿಸಿದ್ದಾರೆ. ಇತ್ತ ಶಿರಾದಲ್ಲೂ ಬಿಜೆಪಿ ಅಭ್ಯರ್ಥಿ ಸಿಎಂ ರಾಜೇಶ್ ಗೌಡ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಮತ್ತು ಜೆಡಿಎಸ್ ಅಮ್ಮಾಜಮ್ಮ ಹಿನ್ನಡೆಯಲ್ಲಿದ್ದಾರೆ. ಈ ಶಿರಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿದ್ದೇ ಆದರೆ ಇಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿದಂತಾಗುತ್ತದೆ.
ಇದಲ್ಲದೆ, ಒಡಿಶಾ, ಜಾರ್ಖಂಡ್ ನಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಛತ್ತೀಸ್ ಘಡದ ಮಾರ್ಹಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಾಗಾಲ್ಯಾಂಡ್ ನ ದಕ್ಷಿಣ ಅಂಗಾಮಿ ಮತ್ತು ಪುಂಗ್ರೊ ಕಿಫೈರ್ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!