ಬೆಂಗಳೂರು, ನ.10: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮೊದಲ ಹಂತದ ಮತ ಎಣಿಕೆ ಮುಕ್ತಾಯಗೊಂಡಿದ್ದು, 6164ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮುನ್ನಡೆ ಸಾಧಿಸಿದ್ದಾರೆ.
ಮೊದಲು ಅಂಚೆ ಮತಗಳ ಎಣಿಕೆ ನಡೆಸಲಾಗಿದ್ದು, ರಾಜರಾಜೇಶ್ವರಿನಗರದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ 253, ಕಾಂಗ್ರೆಸ್ ಅಭ್ಯರ್ಥಿ 112 ಹಾಗೂ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 6 ಮತಗಳನ್ನು ಪಡೆದಿದ್ದಾರೆ.
ಮುನಿರತ್ನ ಅವರು ಮೊದಲ ಸುತ್ತಿನಲ್ಲಿ 6164 ಮತಗಳನ್ನು ಪಡೆದು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. 2915 ಮತಗಳನ್ನು ಕುಸುಮಾ ಪಡೆದಿದ್ದಾರೆ. ಕೃಷ್ಣಮೂರ್ತಿ 136 ಮತಗಳನ್ನು ಪಡೆದಿದ್ದರು.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಅಭ್ಯರ್ಥಿಗಳಿಗೆ ಮಾತ್ರವಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಪ್ರತಿಷ್ಠೆಯಾಗಿದೆ.
ಆರ್. ಆರ್. ನಗರ, ಶಿರಾ ಕದನ ಕುತೂಹಲ: ಆರಂಭಿಕ ಹಂತದಲ್ಲಿ ಮುನಿರತ್ನ ಮುನ್ನಡೆ







































