Wednesday, October 27, 2021
spot_img
Homeರಾಜ್ಯವಿಧಾನ ಪರಿಷತ್‌ ಚುನಾವಣೆ : ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು

ವಿಧಾನ ಪರಿಷತ್‌ ಚುನಾವಣೆ : ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು

ಬೆಂಗಳೂರು, ನ.11: ರಾಜ್ಯದ ವಿಧಾನಪರಿಷತ್’ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಫಲಿತಾಂಶ ಪ್ರಕಟವಾದ ಮೂರು ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಂಡು ಮೇಲ್ಮನೆಯಲ್ಲಿ ಬಲವರ್ಧಿಸಿಕೊಂಡಿದೆ.
ಕಾಂಗ್ರೆಸ್ ವಶದಲ್ಲಿದ್ದ ಈಶಾನ್ಯ ಶಿಕ್ಷಕರ ಕ್ಷೇತ್ರ, ಜೆಡಿಎಸ್ ತೆಕ್ಕೆಯಲ್ಲಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದೆ. ಪಶ್ಚಿಮ ಪದವೀಧರ ಕ್ಷೇತ್ರವನ್ನು ಉಳಿಸಿಕೊಂಡಿದೆ, ಆಗ್ನೇಯ ಪದವೀಧರ ಕ್ಷೇತ್ರದ ಮತ ಎಣಿಕೆ ಆರಂಭ ತಡವಾದ ಕಾರಣ ಬುಧವಾರ ಪ್ರಕಟವಾಗಲಿದೆ.
ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದರಿಂದ 75 ಸದಸ್ಯರು ಇರುವ ಮೇಲ್ಮನೆಯಲ್ಲಿ ಬಿಜೆಪಿಯ ಬಲ ಇನ್ನು ಮುಂದೆ 30ಕ್ಕೆ ಏರಿದೆ. ಕಾಂಗ್ರೆಸ್ 27 ( ಈವರೆಗೆ 28) ಹಾಗೂ ಜೆಡಿಎಸ್ ಬಲ 13ಕ್ಕೆ ಇಳಿದಿದೆ. ಉಳಿದಂತೆ ಸಭಾಪತಿ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸಿದರೆ ಮತ್ತು ಪಕ್ಷೇತರರು ಬೆಂಬಲ ನೀಡಿದರೆ, ಬಿಜೆಪಿ ಬಲ 33ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ.ಮೇಲ್ಮನೆಯಲ್ಲಿ ಬಿಜೆಪಿ ಏಕೈಕ ಅತಿ ದೊಡ್ಡ ಪಕ್ಷವಾಗಲಿದೆ. ಮೇಲ್ಮನೆಯಲ್ಲಿ ಬಹುಮತಕ್ಕೆ 38 ಸ್ಥಾನಗಳ ಅಗತ್ಯವಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!