Sunday, September 26, 2021
spot_img
Homeಸ್ಥಳೀಯ ಸುದ್ದಿಮುದ್ರಾಡಿಯಲ್ಲಿ ಜ್ಞಾನತಾಣ ಕಾರ್ಯಕ್ರಮ

ಮುದ್ರಾಡಿಯಲ್ಲಿ ಜ್ಞಾನತಾಣ ಕಾರ್ಯಕ್ರಮ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುದ್ರಾಡಿ ವಲಯ ಇದರ ವತಿಯಿಂದ ಮುದ್ರಾಡಿ ಸಭಾಭವನದಲ್ಲಿ ಜ್ಞಾನ ತಾಣ ಕಾರ್ಯಕ್ರಮ ನ. 9ರಂದು ನಡೆಯಿತು.

ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಗುಂಡಾಳ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಕೆಡಿಆರ್‌ಡಿಪಿ ಯೋಜನಾಧಿಕಾರಿ ಭಾಸ್ಕರ್ ವಿ. ಕರಪತ್ರ ಬಿಡುಗಡೆಗೊಳಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯ ಶಶಿಕಲಾ, ಮುದ್ರಾಡಿ ವಲಯದ ನೂತನ ವಲಯಾಧ್ಯಕ್ಷ ರತ್ನಾಕರ್, ಮಾಜಿ ವಲಯಾಧ್ಯಕ್ಷ ಸುಧಾಕರ್, ಹೆಬ್ರಿ ವಲಯದ ಮಾಜಿ ವಲಯಾಧ್ಯಕ್ಷ ಮುದ್ದು ಕೃಷ್ಣ, ಮುದ್ರಾಡಿ ವಲಯದ ಮತ್ತು ಹೆಬ್ರಿ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!