ದಿಲ್ಲಿ, ನ.12 :ಆರ್ಥಿಕತೆ ಪುನಶ್ಚೇತನದ ಹಾದಿಯಲ್ಲಿರುವಂತೆಯೇ ಕೇಂದ್ರ ಸರಾಕರ ಇನ್ನಷ್ಟು ಉತ್ತೇಜಕ ಪ್ಯಾಕೇಜ್‌ಗಳನ್ನು ಘೋಷಿಸುವ ಮೂಲಕ ಚೇತರಿಕೆಯ ವೇಗವನ್ನು ಹೆಚ್ಚಿಸುವ ಪ್ರಯತ್ನವನ್ನು ಮಾಡಿದೆ.
ದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದ ಹಲವು ಉಪಕ್ರಮಗಳು ಬಗ್ಗೆ ಮಾಹಿತಿಯಿತ್ತರು.
- ಪಿಎಂ ಆವಾಸ್ ಯೋಜನೆಯಡಿ ನಗರ ಪ್ರದೇಶಗಳ ಜನರಿಗೆ ನೀಡಲು 18 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹಣ ಬಿಡುಗಡೆ
-ಹೊಸ ಉದ್ಯೋಗಗಳಿಗೆ ಎರಡು ವರ್ಷಗಳವರೆಗೆ ನಿವೃತ್ತಿ ನಿಧಿಯಡಿ ಕೊಡುಗೆ ನೀಡಲು ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡಲಿದೆ.
-ಕೊರೊನಾ ಪುನಶ್ಚೇತನ ಹಂತದಲ್ಲಿ ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಆತ್ಮನಿರ್ಭರ ಭಾರತ್ ರೋಜ್ ಗಾರ್ ಯೋಜನೆ.
-28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡು ಯೋಜನೆ ಜಾರಿ - ದೇಶದ ರೈತರಿಗೆ ಹೆಚ್ಚುವರಿ ತುರ್ತು ಕಾರ್ಯ ಸಂಗ್ರಹ ನಿಧಿಯಿಂದ ನಬಾರ್ಡ್ ಮೂಲಕ 25 ಸಾವಿರ ಕೋಟಿ ರೂಪಾಯಿಗಳನ್ನು ವಿತರಣೆ
-ಕಿಸಾನ್ ಕ್ರೆಡಿಟ್ ಕಾರ್ಡು ಮೂಲಕ ರೈತರಿಗೆ 2.5 ಕೋಟಿ ರೂಪಾಯಿಗಳನ್ನು, 1.4 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿನಿಮಯ






























































