ಮಂಗಳೂರು,ನ.13: ಸರಕಾರ ನ.17ರಿಂದ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮ ಕಾಲೇಜುಗಳನ್ನು ಪ್ರಾರಂಭಿಸಲು ಹೇಳಿದ್ದರೂ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ಡಿ.1ರಿಂದ ಪ್ರಾರಂಭವಾಗಲಿವೆ.
ವಿಶ್ವ ವಿದ್ಯಾಲಿಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಡಿ.1ರಿಂದ ಕಾಲೇಜು ಪ್ರಾರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೊನಾ ಮುನ್ನೆಚ್ಚರಿಕೆಗಳನ್ನು ವಹಿಸಿಕೊಂಡು ಡಿ.1ರಿಂದ ಕಾಲೇಜುಗಳನ್ನು ಆರಂಭಿಸಲಾಗುವುದು. ಸರಕಾರದ ಮಾರ್ಗಸೂಚಿಯನ್ನು ಕಾಲೇಜುಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ಡಿ.1ರಿಂದ ಕಾಲೇಜುಗಳು ಆರಂಭ
























