Wednesday, October 27, 2021
spot_img
Homeರಾಜ್ಯರವಿ ಬೆಳೆಗೆರೆ ನಿಧನಕ್ಕೆ ಯಡಿಯೂರಪ್ಪ, ಸುರೇಶ್‌ ಕುಮಾರ್‌ ಸಂತಾಪ

ರವಿ ಬೆಳೆಗೆರೆ ನಿಧನಕ್ಕೆ ಯಡಿಯೂರಪ್ಪ, ಸುರೇಶ್‌ ಕುಮಾರ್‌ ಸಂತಾಪ


ಬೆಂಗಳೂರು, ನ.13: ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ಸ್ಥಾಪಕ ರವಿ ಬೆಳೆಗೆರೆ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ಟೀಟ್ ಮಾಡಿದ್ದಾರೆ. ರವಿ ಬೆಳಗೆರೆ ಕರ್ನಾಟಕದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಎರಡೂವರೆ ದಶಕಗಳಿಂದ ಕೇಳಿಬಂದ ದೊಡ್ಡ ಹೆಸರು. ಅತ್ಯಂತ ಮೇಧಾವಿ ಬರಹಗಾರ. ಬರೆಯಲಿಕ್ಕೆ ಕೂತರೆ ಅವರದು ದೈತ್ಯ ಶಕ್ತಿ. “ಹಾಯ್ ಬೆಂಗಳೂರು” ಎಂಬ ಹೆಸರಿನ ಪತ್ರಿಕೆಯ ಮೂಲಕ ಬಹಳ ಒಳ್ಳೆಯ ಹೆಸರು ಮತ್ತು ಸ್ವಲ್ಪ ನಕಾರಾತ್ಮಕ ಹೆಸರನ್ನೂ ಸಹ ಗಳಿಸಿದ ಓರ್ವ ಪತ್ರಕರ್ತ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!